ಚಾಮರಾಜನಗರ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೆಶನದನ್ವಯ ಡಿಸೆಂಬರ್ 9ರಂದು ಚಾಮರಾಜನಗರ ಜಿಲ್ಲೆಯಾದ್ಯಂತ ಲೋಕ್ ಅದಾಲತ್ ಅನ್ನು ಏರ್ಪಡಿಸಲಾಗಿದೆ.
ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲದ ನ್ಯಾಯಾಲಯಗಳಲ್ಲಿ ಬೈಟೆಕ್‍ಗಳನ್ನು ಏರ್ಪಡಿಸಿ, ಸಂಧಾನಕಾರರನ್ನು ನೇಮಿಸಿ ಲೋಕ್ ಅದಾಲತ್‍ನ್ನು ಆಯಾ ನ್ಯಾಯಾಲಯಗಳಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಲೋಕ್‍ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ, ಕೈಗಾರಿಕಾ ಕಾರ್ಮಿಕ ವೇತನ, ಗ್ರಾಹಕರ ವೇದಿಕೆ, ರಿಯಲ್ ಎಸ್ಟೇಟ್, ಸಾಲ ವಸೂಲಾತಿ, ಚೆಕ್ ಅಮಾನ್ಯ, ಮೋಟಾರ್ ಅಪಘಾತ ಪರಿಹಾರ, ವಿದ್ಯುತ್ ಮತ್ತು ನೀರಿನ ಶುಲ್ಕ, ಕಾರ್ಮಿಕ ವಿವಾದಗಳು, ಭೂ ಸ್ವಾಧೀನ, ವೇತನ ಭತ್ಯೆ ಹಾಗೂ ಪಿಂಚಣಿ, ಸಾರ್ವಜನಿಕ ಉಪಯುಕ್ತತೆ ಸೇವೆ, ರಾಜಿ ಯೋಗ್ಯ ಸಿವಿಲ್ ಮತ್ತು ಕ್ರಿಮಿನಲ್ ಹಾಗೂ ಇತರೆ ಪ್ರಕರಣಗಳು, ಕುಟುಂಬ ನ್ಯಾಯಾಲಯದ ಪ್ರಕರಣ (ವಿವಾಹ ವಿಚ್ಛೇದನವನ್ನು ಹೊರತುಪಡಿಸಿ) ಗಳನ್ನು ಜನತಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಲಾಗುವುದು.
ಕರ್ನಾಟಕ ಉಚ್ಚ ನ್ಯಾಯಾಲಯದ ಮಾರ್ಗಸೂಚಿ (ಎಸ್.ಓ.ಪಿ) ಯಂತೆ ಡಿಸೆಂಬರ್ 9ರಂದು ನಡೆಯುವ ಲೋಕ್ ಅದಾಲತ್‍ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯೋಗ್ಯ ಪ್ರಕರಣಗಳನ್ನು ಶೀಘ್ರ ಹಾಗೂ ಪರಿಣಾಮಕಾರಿ ತೀರ್ಮಾನಕ್ಕಾಗಿ ಚಾಮರಾಜನಗರ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಯಳಂದೂರು, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಉಭಯ ಪಕ್ಷಕಾರರುಗಳು ರಾಜಿ ಮಾಡಿಕೊಳ್ಳಲು ಸಂಧಾನಕಾರರ ಮೂಲಕ ಸೂಕ್ತ ಮಾರ್ಗದರ್ಶನ ನೀಡುವ ಪ್ರತಿದಿನದ ಪೂರ್ವಭಾವಿ ಸಮಾಲೋಚನೆಗಳು ಭೌತಿಕ, ವಿ.ಸಿ. ಮೂಲಕ ನಡೆಯುತ್ತಿದ್ದು, ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಆನ್‍ಲೈನ್, ವಿಡಿಯೋ ಕಾನ್ಫೆರೆನ್ಸ್, ಇ-ಮೇಲ್, ಎಸ್.ಎಂ.ಎಸ್, ವಾಟ್ಸ್ ಆಪ್ ಮೂಲಕ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಸಂಬಂಧಪಟ್ಟ ಪ್ರಾಧಿಕಾರ ಮತ್ತು ಸಮಿತಿಗಳನ್ನು ದೂರವಾಣಿಗಳ ಮೂಲಕ ಸಂಪರ್ಕಿಸಿ, ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳುವ ಮೂಲಕ ತಕ್ಷಣ ಪರಿಹಾರ ಪಡೆದುಕೊಳ್ಳಬಹುದು.
ಮೆಗಾ ಲೋಕ್ ಅದಾಲತ್‍ಗೆ ಸಂಬಂಧಿಸಿದ ವಕೀಲರು, ಕಕ್ಷಿದಾರರು ಸಹಕಾರ ನೀಡಿ ಸಂಧಾನಕಾರರು ನೀಡುವ ಸಲಹೆಗಳನ್ನು ಆಲಿಸಿ, ಪರಸ್ಪರ ಒಪ್ಪಿಗೆಯಾದಲ್ಲಿ ಪ್ರಕರಣವನ್ನು ಲೋಕ್ ಅದಾಲತ್‍ನಲ್ಲಿ ಬಗೆಹರಿಸಿಕೊಳ್ಳಬಹುದು. ಇದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗಲಿದೆ. ಅಲ್ಲದೇ ಪಕ್ಷಕಾರರ ನಡುವೆ ಬಾಂಧವ್ಯ ವೃದ್ದಿಸುತ್ತದೆ.
ಹೆಚ್ಚಿನ ಮಾಹಿತಿಗಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯವಾಣಿ ಸಂ-15100, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯವಾಣಿ ಸಂಖ್ಯೆ-1800-425-90900, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಾಮರಾಜನಗರ ಸಹಾಯವಾಣಿ ಸಂಖ್ಯೆ-08226-226022, ಯಳಂದೂರು ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಾಯವಾಣಿ ಸಂಖ್ಯೆ-08226-240229, ಕೊಳ್ಳೇಗಾಲ ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಾಯವಾಣಿ ಸಂಖ್ಯೆ-08224-256788, ಗುಂಡ್ಲುಪೇಟೆ ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಾಯವಾಣಿ ಸಂಖ್ಯೆ-08229-223279 ಅಥವಾ ಇ-ಮೇಲ್ dlsachnagar2017@gmail.com —– dlsachnagar2021@gmail.com ಹಾಗೂ ಜಟsಚಿಛಿhಟಿಚಿgಚಿಡಿ2021@gmಚಿiಟ.ಛಿom ಪ್ರಾಧಿಕಾರದ ಈಚಿಛಿe ಃooಞ ಖಾತೆ : ಆಟsಚಿ ಅhಚಿmಚಿಡಿಚಿರಿಚಿಟಿಚಿgಚಿಡಿಚಿ ಸಂಪರ್ಕಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಧರ. ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.