ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರಿಗೌಡ ಅವರ ಪ್ರತಿಮೆ ಅನಾವರಣ

ಮೈಸೂರು:ತೋಟಗಾರಿಕೆ ಪಿತಾಮಹ ಡಾ. ಎಂ.ಹೆಚ್. ಮರಿಗೌಡ ಅವರ ಪ್ರತಿಮೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು.

ಇಂದು ನಗರದ ಕರ್ಜನ್ ಪಾರ್ಕ್ ನಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಮೈಸೂರು ಹಾಗೂ ತೋಟಗಾರಿಕೆ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ತೋಟಗಾರಿಕಾ ಪಿತಾಮಹ ಡಾ. ಎಂ.ಹೆಚ್. ಮರಿಗೌಡರ ಪ್ರತಿಮೆ ಅನಾವರಣಗೊಳಿಸಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಪ್ರತಿಮೆಯು 12 ಅಡಿ ಎತ್ತರವಿದ್ದು, ಒಂದು ಟನ್ ತೂಕದ ಕಂಚಿನ ಪ್ರತಿಮೆಯಾಗಿದೆ.

ಈ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್ ಸಿ ಮಹದೇವಪ್ಪ, ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್. ಮೈಸೂರು ಮಹಾನಗರ ಪಾಲಿಕೆಯ ಮಹಾ ಪೌರರಾದ ಶಿವಕುಮಾರ್, ಶಾಸಕರಾದ, ಕೆ ಹರೀಶ್ ಗೌಡ, ಡಿ ರವಿಶಂಕರ್, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿಗಳಾದ ಡಾ. ಕೆ .ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *