ದಸರಾ ಮಹೋತ್ಸವ : ಅ. 18ರಂದು ಹಾಲು ಕರೆಯುವ ಸ್ಪರ್ಧೆ

ಚಾಮರಾಜನಗರ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಚಾಮರಾಜನಗರ ದಸರಾ ಮಹೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆಯನ್ನು ಅಕ್ಟೋಬರ್ 18ರಂದು ಏರ್ಪಡಿಸಲಾಗಿದೆ.

ನಗರದ ಪಶು ಆಸ್ಪತ್ರೆ ಆವರಣದಲ್ಲಿ ನಿಯಮಾನುಸಾರ 2 ಬಾರಿ ಅಂದರೆ ಬೆಳಿಗ್ಗೆ 6.30 ಗಂಟೆ ಮತ್ತು ಸಂಜೆ 6 ಗಂಟೆಗೆ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗಿದೆ.

ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ಅತೀ ಹೆಚ್ಚಿನ ಹಾಲು ಕರೆದ ರಾಸುವಿನ ಮಾಲೀಕರಿಗೆ ಪ್ರಥಮ ಬಹುಮಾನವಾಗಿ 15 ಸಾವಿರ ರೂ., ದ್ವಿತೀಯ ಬಹುಮಾನವಾಗಿ 10 ಸಾವಿರ ರೂ., ತೃತೀಯ ಬಹುಮಾನವಾಗಿ 5 ಸಾವಿರ ರೂ.ಗಳ ನಗದು ಬಹುಮಾನವನ್ನು ನೀಡಲಾಗುತ್ತದೆ. ಆಸಕ್ತ ರೈತರು ಸ್ಪರ್ಧೆಯಲ್ಲಿ ಭಾಗವಹಿಸಲು ಹೆಚ್ಚಿನ ಮಾಹಿತಿಗಾಗಿ ನಗರದ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳನ್ನು (ಆಡಳಿತ) ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *