ಮೈಸೂರು: ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಅಕ್ಟೋಬರ್ 15 ರಿಂದ 2024 ರ ಜನವರಿ 12 ರವರೆಗೆ 90 ದಿನಗಳ ದಸರಾ ವಸ್ತುಪ್ರದರ್ಶನವನ್ನು ಆಯೋಜಿಸಲಾಗುತ್ತದೆ. ಈ ಸಂಬAಧ ಪಿ. ಕಾಳಿಂಗರಾವ್ ಗಾನ ಮಂಟಪದಲ್ಲಿ ಪ್ರತಿದಿನ ಸಂಜೆ 6:30 ರಿಂದ 9:30 ಗಂಟೆವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.
ಆಸಕ್ತ ಕಲಾವಿದರು/ಸಂಘ ಸಂಸ್ಥೆಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸಿದಲ್ಲಿ ಅರ್ಜಿಯನ್ನು WWW.Keaonline.in ನಲ್ಲಿ ಡೌನ್ಲೋಡ್ ಮಾಡಿಕೊಂಡು ಈ ಹಿಂದೆ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿರುವ ಬಗೆಗೆ ದೃಢೀರಕಣ ಪತ್ರಗಳು, ಭಾವಚಿತ್ರ ಮತ್ತು ಸಿ.ಡಿ.ಯೊಂದಿಗೆ ಸೆ.25 ರ ಸಂಜೆ 4.30 ರೊಳಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಕಛೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರವನ್ನು ಕಛೇರಿ ವೇಳೆಯಲ್ಲಿ ಹಾಗೂ ದೂ.ಸಂ: 0821- 2523626 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.