
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕು ಆಂದೋಲನ ದಿನಪತ್ರಿಕೆಯ ವರದಿಗಾರರು, ಕರ್ನಾಟಕ ಪ್ರೆಸ್ ಕ್ಲಬ್ ಕೆ.ಆರ್.ನಗರ ತಾಲೂಕು ಘಟಕದ ಅಧ್ಯಕ್ಷರು, ಸಾಮಾಜಿಕ ಸೇವಾ ಕಾರ್ಯಕರ್ತರು ಹಾಗೂ ಸಂಘಟಕರಾದ ಸಾಲಿಗ್ರಾಮ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮದ ಕೆ.ಟಿ.ಮೋಹನ್ ಕುಮಾರ್ ಗೆ ಮೈಸೂರಿನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ನ.30ರಂದು ನಡೆದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸುಮಂಗಲಿ ಸೇವಾ ಟ್ರಸ್ಟ್ ವತಿಯಿಂದ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮೇಲುಕೋಟೆ ನಂಬಿ ಮಠದ ಶ್ರೀ ಇಳೈ ಆಳ್ವಾರ್ ಸ್ವಾಮೀಜಿ, ನಿವೃತ್ತ ಮುಖ್ಯ ಶಿಕ್ಷಕ ಡಾ.ಯೋಗೇಂದ್ರ, ಸಾಹಿತಿ ಟಿ.ಸತೀಶ್ ಜವರೇಗೌಡ, ಸುಮಂಗಲಿ ಸೇವಾ ಟ್ರಸ್ಟ್ ಅಧ್ಯಕ್ಷ ಹೆಚ್.ವಿ.ಪುಟ್ಟಸ್ವಾಮಿ, ಚಲನಚಿತ್ರ.ನಿರ್ಮಾಪಕ
ಎಸ್.ಕೆ.ಮೋಹನ್ ಕುಮಾರ್, ಚಲನಚಿತ್ರ ನಿರ್ದೇಶಕ ರಾಜು, ಸಮಾಜ ಸೇವಕ ಸುರೇಶ್ ಗೋಲ್ಡ್ ಸೇರಿದಂತೆ ಹಲವು ಗಣ್ಯರುಗಳು ಇದ್ದರು.