ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯಮಶೀಲತೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯು ಕೌಶಲ್ಯಾಭಿವೃದ್ಧಿ ಇಲಾಖಾ ವ್ಯಾಪ್ತಿಯ ಸಿಡಾಕ್ ಸಂಸ್ಥೆಯ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಉದ್ಯಮಶೀಲತೆಯ ಹತ್ತು ದಿನಗಳ ಉಚಿತ ತರಬೇತಿ ನೀಡಲಿದ್ದು ಆಸಕ್ತರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಕನಿಷ್ಟ 21 ರಿಂದ 50ರ ವಯೋಮಿತಿಯಲ್ಲಿರಬೇಕು. ಪಿ.ಯು.ಸಿ ಮತ್ತು ಮೇಲ್ಪಟ್ಟ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರಬೇಕು.
ಉದ್ದಿಮೆ, ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಲು ಉತ್ತೇಜನ ಮತ್ತು ಮಾರ್ಗದರ್ಶನ ನೀಡಲು 10 ದಿನಗಳ ಅವಧಿಯ ಉದ್ಯಮಶೀಲತಾ ಉಚಿತ ತರಬೇತಿಯನ್ನು ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಸರ್ಕಾರದ ವಿವಿಧ ಇಲಾಖೆಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಉದ್ದಿಮೆಗಳನ್ನು ಸ್ಥಾಪಿಸಲು ನೀಡಲಾಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್‍ಗಳು ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳಿಂದ ನೀಡಲಾಗುವ ಸಾಲ ಸೌಲಭ್ಯದ ತಿಳಿಸಲಾಗುವುದು. ತರಬೇತಿಗೆ ಹಾಜರಾಗುವ ಪ್ರತಿ ಅಭ್ಯರ್ಥಿಗೆ 10 ದಿನಗಳಿಗೆ ಪ್ರಯಾಣ ಭತ್ಯೆಯಾಗಿ 1 ಸಾವಿರ ರೂ. ನೀಡಲಾಗುತ್ತದೆ.

ಅರ್ಜಿಗಳನ್ನು ನವೆಂಬರ್ 30ರೊಳಗಾಗಿ ಸಮಾಜ ಕಲ್ಯಾಣ ಇಲಾಖೆಯ ಆನ್‍ಲೈನ್ ವೆಬ್‍ಸೈಟ್ https://www.scsptsp.karnataka.gov.in/BMS/CDOC/EDPRegistrationForm.aspx ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ 24*7 ಸಹಾಯವಾಣಿ 9482-300-400 ಅಥವಾ ಖಾತೆ@SWಆಉoಞ ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *