ಬೀದಿಬದಿ ವ್ಯಾಪಾರಿಗಳ ಕುಂದು ಕೊರತೆ ನಿವಾರಣಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

ಚಾಮರಾಜನಗರ: ಚಾಮರಾಜನಗರ ನಗರಸಭೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಡೇ ನಲ್ಮ್ ಅಭಿಯಾನದಡಿ ನಗರಸಭಾ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳ ಕುಂದು ಕೊರತೆ ನಿವಾರಣಾ ಸಮಿತಿ ರಚಿಸಲು ಅರ್ಜಿ ಆಹ್ವಾನಿಸಲಾಗಿದೆ.

ನಿವೃತ್ತ ಸಿವಿಲ್ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಬೀದಿಬದಿ ವ್ಯಾಪಾರಿಗಳ ಕುಂದು ಕೊರತೆ ನಿವಾರಣಾ ಸಮಿತಿ ರಚನೆಗಾಗಿ ಗೌರವಾನ್ವಿತ ನಿವೃತ್ತ ಸಿವಿಲ್ ನ್ಯಾಯಾಧೀಶರು ಮತ್ತು ಕಳಂಕರಹಿತ ಸೇವಾ ದಾಖಲೆಯುಳ್ಳ ರಾಜ್ಯ ಸರ್ಕಾರದ ನಿವೃತ್ತ ಎ ದರ್ಜೆ ಅಧಿಕಾರಿ ಹಾಗೂ ಒಬ್ಬರು ಬೀದಿಬದಿ ವ್ಯಾಪಾರಿ ಮತ್ತು ಅನೌಪಚಾರಿಕ ಆರ್ಥಿಕ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಪ್ರಖ್ಯಾತ ಸಾಮಾಜಿಕ ಕಾರ್ಯಕರ್ತರು ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ನಗರಸಭೆ ಪೌರಾಯುಕ್ತರಿಗೆ ೧೦ ದಿನಗಳೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯೋಜನಾಧಿಕಾರಿ ವೆಂಕಟನಾಯ್ಕ ಮೊ.ಸಂ ೭೪೧೧೮೧೧೨೩೧ ಅನ್ನು ಸಂಪರ್ಕಿಸುವಂತೆ ಪೌರಾಯುಕ್ತರಾದ ರಾಮ್‌ದಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *