ಮಕ್ಕಳ ಪ್ರತಿಭೆ ಗುರ್ತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

ಚಾಮರಾಜನಗರ: ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಮಾಜಿ ಸಚಿವ ಹಾಗು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಸಂತ ಜೋಸೆಪ್‍ರ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಅವರಣದಲ್ಲಿ ಜಿಲ್ಲಾ ಆಡಳಿತ, ಕ್ಷೇತ್ರÀ ಶಿಕ್ಷಣಾಧಿಕಾರಿಗಳ ಕಚೇರಿಯ ವತಿಯಿಂದ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸುತ್ತಿದ್ದೇವೆ. ಶಿಕ್ಷಕರು ಸಹ ಸರ್ಕಾರಿ ಶಾಲೆಯನ್ನು ಅಭಿವೃದ್ದಿ ಪಡಿಸುವುದು ಹಾಗೂ ಮಕ್ಕಳಿಗೆ ಗುಣಾತ್ಮಾಕ ಶಿಕ್ಷಣವನ್ನು ಕೊಡಿಸಲು ಶ್ರಮಿಸುತ್ತಿದ್ದಾರೆ. 26 ಕ್ಲಸ್ಟರ್ ಮಟ್ಟದಲ್ಲಿ ಪ್ರತಿಭಾ ಕಾರಂಜಿ ಹಾಗು ಕಲೋತ್ಸವ ನಡೆದು ಈಗ ತಾಲೂಕು ಮಟ್ಟದಲ್ಲಿ ಮಕ್ಕಳು ಭಾಗವಹಿಸಿದ್ದಾರೆ. ಮಕ್ಕಳು ಸಹ ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡುವ ಜೊತೆಗೆ ಇಂತ ಕಲೆಗಳಲ್ಲಿ ಭಾಗವಹಿಸಿ, ಆಸಕ್ತಿ ವಹಿಸುವ ಮೂಲಕ ಪ್ರತಿಭೆಯನ್ನು ಪ್ರದರ್ಶನ ಮಾಡಬೇಕೆಂದು ಎಂದು ಕಿವಿಮಾತು ಹೇಳಿದರು.

ನಂಜುಂಡಪ್ಪ ವರದಿ ಅನ್ವಯ ಚಾಮರಾಜನಗರ ಜಿಲ್ಲೆಯು ಅತ್ಯಂತ ಹಿಂದುಳಿದ ತಾಲೂಕಾಗಿದೆ. ಈಗಾಗಲೇ ನಮ್ಮ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ್ದಾರೆ. ಶೈಕ್ಷಣಿಕವಾಗಿ ಜಿಲ್ಲೆಯು ಸಹ ಪ್ರಗತಿಯನ್ನು ಸಾಧಿಸುತ್ತಿದೆ. ಪ್ರತಿ ವರ್ಷ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದೇ ಸಾಕ್ಷಿಯಾಗಿದೆ.

ಹಿಂದುಳಿದ ಉಪ್ಪಾರ ಸಮುದಾಯಲ್ಲಿ ಶೈಕ್ಷಣಿಕವಾಗಿ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಬಾರಿ 300ಕ್ಕು ಹೆಚ್ಚು ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ. ಇದೆಲ್ಲವು ಸಹ ಪ್ರಗತಿಯ ಸಂಕೇತವಾಗಿದೆ. ಮುಂದಿನ ದಿನಗಳಲ್ಲಿ ಶಾಲಾ ಅಭಿವೃದ್ದಿಗಾಗಿ ವಿಶೇಷ ಅನುದಾನ ಹಾಗೂ ದುರಸ್ತಿಗೆ ಹೆಚ್ಚಿನ ಕ್ರಮವಹಿಸುವುದಾಗಿ ಪುಟ್ಟರಂಗಶೆಟ್ಟಿ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ, ಚಾಮರಾಜನಗರ ಜಿಲ್ಲೆಯು ಶಿಕ್ಷಣ ಸೇರಿದಂತೆ ಎಲ್ಲಾ ರಂಗದಲ್ಲಿಯು ಪ್ರಗತಿಯನ್ನು ಹೊಂದಿರುವ ಜಾನಪದರ ಜಿಲ್ಲೆಯಾಗಿದೆ. ಇಲ್ಲಿ ಕಲೆಗೆ ಹೆಚ್ಚಿನ ಪ್ರೋತ್ಸಾಹ ಮತ್ತು ಉತ್ಸಾಹ ಇದೆ. ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸುವ ಮಕ್ಕಳು, ಪೋಷಕರು ಹಾಗೂ ಶಿಕ್ಷಕರ ಉತ್ಸಾಹವೇ ಕಾರಣವಾಗಿದೆ. ಹೀಗಾಗಿ ತಲೂಕು ಮಟ್ಟದ ಪ್ರತಿಭಾ ಕಾರಂಜಿಯನ್ನು ನೋಡುತ್ತಿದ್ದರೆ ಇತರೇ ಯಾವುದೇ ಜಿಲ್ಲೆಗಳಲ್ಲಿ ಇಂಥ ಸಂಭ್ರಮ ಇರುವುದಿಲ್ಲ. ಇದು ಚಾಮರಾಜನಗರದಲ್ಲಿ ನೋಡಲು ಮಾತ್ರ ಸಾದ್ಯ ಎಂದು ಬಣ್ಣಿಸಿದರು.

ಕ್ಷೇತ್ರಾ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ ಮಾತನಾಡಿ, ಶೈಕ್ಷಣಿಕ ಪ್ರಗತಿಯಲ್ಲಿ ಪ್ರತಿಭಾ ಕಾರಂಜಿ ಹೆಚ್ಚು ಸಹಕಾರಿಯಾಗಿದೆ. ಮಕ್ಕಳಲ್ಲಿ ಉತ್ಸಾಹ ಹಾಗೂ ಓದಿನ ಬಗ್ಗೆ ಇನ್ನು ಹೆಚ್ಚಿನ ಅಸಕ್ತಿಯನ್ನು ಹೊಂದಲು ಸಾಧ್ಯವಾಗುತ್ತದೆ. ತೀರ್ಪುಗಾರರು ಸಹ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರನ್ನು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಆಯ್ಕೆಯಾಗುವಂತೆ ಮಾಡಬೇಕು ಎಂದು ತಿಳಿಸಿದರು.
ಪ್ರತಿಭಾ ಕಾರಂಜಿಯಲ್ಲಿ ವಿವಿಧ ನಮೂನೆಗಳ ಪ್ರತಿಭಾ ಪ್ರದರ್ಶನ ಹಾಗೂ ಕಲೋತ್ಸವ ನಡೆದು, ಇಲ್ಲಿ ಆಯ್ಕೆಯಾದ ಮಕ್ಕಳನ್ನು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಕಳುಹಿಸಲಾಯಿತು.

ಕಾರ್ಯಕ್ರಮದಲ್ಲಿ ಡಯಟ್ ಪ್ರಾಂಶುಪಾಲ ಕಾಶೀನಾಥ್, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ರಾಜೀವ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ಜಿಲ್ಲಾ ಕಾರ್ಯಧರ್ಶಿ ಕಿರಣ್ ರಾಜ್, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ. ಎನ್. ಮಹದೇವಸ್ವಾಮಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ. ರಾಮಸ್ವಾಮಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ತಾಲೂಕು ಕಾರ್ಯದರ್ಶಿ ಸುಧಾ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಹರವೆ ಮಂಜುನಾಥ್, ಜಿ.ಪಿ. ನೇಮಿರಾಜು, ಮಹದೇವಸ್ವಾಮಿ, ಎಂ.ಡಿ. ಮಹದೇವಯ್ಯ. ಲಾಲಿಂಗಸ್ವಾಮಿ, ರಾಚಯ್ಯ, ರಂಗಸ್ವಾಮಿ, ಜೋಸೆಫ್, ಚಿಕ್ಕಬಸವಯ್ಯ, ಸಿದ್ದಮಲ್ಲಪ್ಪ, ವೆಂಕಟೇಶ್ ನಾಯಕ, ಶಿವನಂಜಯಯ್, ಮಹದೇವಮೂರ್ತಿ, ನಾಗರಾಜು, ನಾಗಣ್ಣ, ತಗೂಡರಯ್ಯ, ಪರಶಿವಮೂರ್ತಿ, ಮಲ್ಲಿಕಾರ್ಜುನ್, ನಟರಾಜು, ಶಶಿಕಲಾ ಸೇರಿದಂತೆ ತಾಲೂಕು ವ್ಯಾಪ್ತಿಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಮತ್ತು ಪದಾಧಿಕಾರಿಗಳು ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *