ಚಾಮರಾಜನಗರ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಇಂದು ಜಿಲ್ಲಾ ಮಟ್ಟದ ಪ್ರಬಂಧ, ಭಿತ್ತಿಚಿತ್ರ ರಚನೆ, ರಸಪ್ರಶ್ನೆ ಸ್ಪರ್ಧೆಯನ್ನು ನಗರದ ಶ್ರೀ ರಾಮಚಂದ್ರ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿತ್ತು.

ಜಿಲ್ಲೆಯ ತಾಲ್ಲೂಕು ವiಟ್ಟದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದ 40 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್ ರವರು ವಿದ್ಯಾರ್ಥಿಗಳ ಜೊತೆಗೂಡಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಮಚಂದ್ರರಾಜೇ ಅರಸ್ ರವರು ದೇಶದ ಸಂವಿಧಾನದ ಘನತೆ ಎತ್ತಿ ಹಿಡಿಯಲು ಪ್ರಜಾಪ್ರಭುತ್ವದ ಬಲವರ್ಧನೆಗೆ ದೇಶ ಅಭಿವೃದ್ಧಿ ಹೊಂದಲು ಮತದಾನ ಬಹಳ ಮುಖ್ಯವಾಗಿದೆ. ಶೇ. 100 ರಷ್ಟು ಮತದಾನ ಮಾಡಲು ಅರ್ಹ ವಯಸ್ಸಿನ ಎಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದರು.
ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಈಗಾಗಲೇ ಇ.ಎಲ್.ಸಿ ಕ್ಲಬ್ಗಳನ್ನು ಸ್ಥಾಪಿಸಿ ಅದರ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳುವಂತೆ ಜಾಗೃತಿ ಅರಿವು ಮೂಡಿಸಲು ಜಾಥ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸಂವಿಧಾನ ಬದ್ಧವಾಗಿ ದೊರೆತಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಎಲ್ಲರೂ ಚಲಾವಣೆ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು. ಮತದಾನದ ಪಾವಿತ್ರ್ಯತೆ ಮತ್ತು ಮಹತ್ವವನ್ನು ತಿಳಿದುಕೊಂಡು ಯಾವುದೇ ಒತ್ತಡಗಳ ಆಮಿಷಗಳಿಗೆ ಒಳಗಾಗದೇ ನ್ಯಾಯಸಮ್ಮತವಾಗಿ ಮತದಾನ ಮಾಡುವಂತೆ ವಿದ್ಯಾರ್ಥಿಗಳು ನೆರೆ-ಹೊರೆಯ ಮನೆಯವರು, ತಮ್ಮ ಮನೆಯ ಸದಸ್ಯರಿಗೆ ಅರಿವು ಮೂಡಿಸಬೇಕು ಎಂದು ರಾಮಚಂದ್ರರಾಜೇ ಅರಸ್ ರವರು ತಿಳಿಸಿದರು.
ಡಯಟ್ ನ ಹಿರಿಯ ಉಪನ್ಯಾಸಕÀರಾದ ನಾಗರಾಜು, ಶಿಕ್ಷಣ ಇಲಾಖೆಯ ಇತರೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.