ಚಾಮರಾಜನಗರ: ಮುಂದಿನ ಐದು ವರ್ಷಗಳಲ್ಲಿ ಮಲೈಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸಲಾಗುವುದು.ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಗುವುದೆಂದು ಎಂದು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಇಂದು ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಲೈ ಮಹದೇಶ್ವರನ ಬೆಟ್ಟ ಆಧ್ಯಾತ್ಮಿಕ ಮಹತ್ವದ ಪುಣ್ಯ ಸ್ಥಳ. ಎಲ್ಲಾ ವರ್ಗದವರ ಆಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ಭಕ್ತಾಧಿಗಳಿಗೆ ಹೆಚ್ಚಿನ ಮೂಲ ಸೌಕರ್ಯ ಒದಗಿಸಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ದಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿಯವರು ತಿಳಿಸಿದರು.
ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.
ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪಯರ್ಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದು ಮುಖ್ಯಮಂತ್ರಿಯವರು ಸಲಹೆ ಮಾಡಿದರು.
ಇದೇ ವೇಳೆ ಮಲೈ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದನ್ನು ತಪೆÇೀಭವನ ಹೆಸರಿನಲ್ಲಿ ಕರೆಯಲಾಗುವುದು. ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೆÇೀಭವನ ಎಂದು ಕರೆಯಬೇಕು. ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ಸಲಹೆಯಂತೆ ತಪೆÇೀಭವನ ಎಂದು ಬದಲಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಸುತ್ತೂರು ಶ್ರೀಗಳಾದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಸಾಲೂರು ಬೃಹನ್ಮಠಾಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ದಿವ್ಯ ಸಮ್ಮುಖ ವಹಿಸಿದ್ದರು. ಶಾಸಕರಾದ ಎಂ.ಆರ್. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಪಶುಸಂಗೋಪನೆ, ರೇμÉ್ಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಹಕಾರ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಎನ್. ಮಂಜುನಾಥ್ ಪ್ರಸಾದ್, ಗ್ರಾಮ ಪಂಚಾಯಿತಿ ಅದ್ಯಕ್ಷರಾದ ಅರ್ಚನ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಪದ್ಮಿನಿ ಸಾಹು, ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಇತರರು ಉಪಸ್ಥಿತರಿದ್ದರು.