ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಪಾದರ್ಪಣೆ 50 ವರ್ಷ: ಜಿಲ್ಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

ಚಾಮರಾಜನಗರ: ಹಿರಿಯ ರಾಜಕೀಯ ಮುತ್ಸದಿಗಳಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜಕೀಯಕ್ಕೆ ಪಾದರ್ಪಣೆ ಮಾಡಿ 50 ವರ್ಷಗಳು ಕಳೆದಿದ್ದು, ಅವರು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ 1 ವರ್ಷಗಳು ಯಶಸ್ವಿಯಾಗಿ ಪೊರೈಸಿದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರ ಡಿಸೆಂಬರ್ ಮಾಹೆಯಲ್ಲಿ ಅದ್ದೂರಿಯಾಗಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಹಾಗೂ ಕೇಂದ್ರದಲ್ಲಿ ಸಚಿವರಾಗಿ ವಿರೋಧ ಪಕ್ಷದ ನಾಯಕರಾಗಿ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ನಾಯಕರಾಗಿದ್ದಾರೆ. ಅವರ 50 ವರ್ಷಗಳ ರಾಜಕೀಯ ಪ್ರಯಾಣ ಮತ್ತು ಒಂದು ವರ್ಷಗಳು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಉತ್ತಮ ಸೇವೆ ಸಲ್ಲಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನ್ಮುಖರಾಗಿದ್ದಾರೆ. ಹೀಗಾಗಿ ಅವರ ಅಭಿಮಾನಿಗಳು ಹಾಗು ಕಾರ್ಯಕರ್ತರು, ಮುಖಂಡರು ಶಾಸಕರು ಎಲ್ಲರು ಸೇರಿ, ಜಿಲ್ಲೆಯಲ್ಲಿ ಖರ್ಗೆ ಅವರನ್ನು ಅಭಿನಂದಿಸುವ ಕಾರ್ಯಕ್ರಮವನ್ನು ನಡೆಯಲಿದ್ದು, ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ಅವರ ಸಾಧನೆಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಬಹಳ ಅರ್ಥಪೂರ್ಣ ಮತ್ತು ಔಚಿತ್ಯ ಪೂರ್ಣವಾಗಿ ಆಯೋಜನೆ ಮಾಡಲಾಗುತ್ತದೆ ಎಂದು ನಂಜುಂಡಸ್ವಾಮಿ ತಿಳಿಸಿದರು.

ಕಾಂಗ್ರೆಸ್ ಪಕ್ಷದ ವಿರೋಧಪಕ್ಷದ ನಾಯಕರಾಗಿರುವ ಖರ್ಗೆ ಅವರು ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಮೂರು ರಾಜ್ಯಗಳ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ 2 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ. ತಮ್ಮ ಹೋರಾಟ ಮೂಲಕ ಬಿಜೆಪಿ ಸರ್ಕಾರ ವೈಫಲ್ಯವನ್ನು ಸದನ ಹೊರಗೆ ಹಾಗೂ ಒಳಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಪಕ್ಷದ ಸಂಘಟನೆಯಲ್ಲಿ ತಮ್ಮದೇ ಅದ ವಿಶಿಷ್ಟ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಅವರ ರಾಜಕೀಯ ಜೀವನ ಕುರಿತು ಯುವ ಪೀಳಿಗೆಗೆ ತಿಳಿಸುವುದು ಹಾಗೂ ಕಾಂಗ್ರೆಸ್ ತತ್ವ ಸಿದ್ದಾಂತಗಳನ್ನು ಜನರಿಗೆ ತಿಳಿಸುವ ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿ ನಮ್ಮದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ದುರಾಡಳಿತ ಮತ್ತು ದಲಿತ ವಿರೋಧಿ ಬಿಜೆಪಿಯನ್ನು ಸೋಲಿಸುವ ಮೂಲಕ ಜಾತ್ಯತೀತ ಪಕ್ಷವಾಗಿರುವ ಕಾಂಗ್ರೆಸ್‍ಅನ್ನು ಗೆಲ್ಲಿಸಲು ಮುಂದಾಗೋಣ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ 20ಕ್ಕು ಹೆಚ್ಚು ಸಂಸದರನ್ನು ಲೋಕಸಭೆಗೆ ಕಳುಹಿಸುವ ಜವಾಬ್ದಾರಿ ನಮ್ಮದಾಗಿದೆ ಎಂದರು.

ಗೋಷ್ಠಿಯಲ್ಲಿ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ನಲ್ಲೂರು ಸೋಮೇಶ್ವರ್, ತಾ.ಪಂ.ಮಾಜಿ ಸದಸ್ಯ ಪಿ. ಕುಮಾರನಾಯಕ್, ಜಿಲ್ಲಾ ವಕ್ತಾರರಾದ ಕೃಷ್ಣಮೂರ್ತಿ, ರಂಗಸ್ವಾಮಿ, ಸೋಮಣ್ಣ, ಕೆಂಪರಾಜು, ಇತರರು ಇದ್ದಾರೆ.

Leave a Reply

Your email address will not be published. Required fields are marked *