ಚಾಮರಾಜನಗರ: 2023-24ನೇ ಸಾಲಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಚಾಮರಾಜನಗರ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮ ಹಾಗೂ ಕ್ಷೇತ್ರ ಪ್ರಚಾರದ ಒಂದು ವರ್ಷದ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ 2024ರ ಜನವರಿ ಯಿಂದ ಡಿಸೆಂಬರ್ ವರೆಗೆ ತರಬೇತಿ ನೀಡಲಿದ್ದು, ಚಾಮರಾಜನಗರ ವಾರ್ತಾ ಇಲಾಖೆಯ ಜಿಲ್ಲಾ ಕಚೆÉೀರಿಗೆ ಪರಿಶಿಷ್ಟ ಜಾತಿಗೆ ಸೇರಿದ ಓರ್ವ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಓರ್ವ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ತರಬೇತಿ ಅವಧಿಯಲ್ಲಿ ಪ್ರತಿ ಮಾಹೆಯಾನ ಅಭ್ಯರ್ಥಿಗೆ 15 ಸಾವಿರ ರೂ. ಸ್ಟೈಫಂಡ್ ನೀಡಲಾಗುತ್ತದೆ.
ಕರ್ನಾಟಕ ರಾಜ್ಯದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಕಂಪ್ಯೂಟರ್ ಜ್ಞಾನ, ಕನ್ನಡ ಭಾಷೆ ಬಳಕೆ ಬಗ್ಗೆ ಪ್ರಬುದ್ದತೆ ಇರಬೇಕು. ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು 35 ವರ್ಷ ಮೀರಿರಬಾರದು. ಅಭ್ಯರ್ಥಿಗಳು ಪದವಿ/ಸ್ನಾತ್ತಕೋತ್ತರ ಅಂತಿಮ ವರ್ಷದ ಪದವಿ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ/ಸ್ನಾತ್ತಕೋತ್ತರ ಪದವಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಪಾಸ್ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ ಇನ್ನಿತರ ಪೂರಕ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 7ರೊಳಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಜಿಲ್ಲಾ ಆಡಳಿತ ಭವನದ ಆವರಣ, ಬಿ. ರಾಚಯ್ಯ ಜೋಡಿ ರಸ್ತೆ, ಚಾಮರಾಜನಗರ ಇಲ್ಲಿಗೆ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಜಿಲ್ಲಾ ಆಡಳಿತ ಭವನದ ಆವರಣ, ಬಿ. ರಾಚಯ್ಯ ಜೋಡಿ ರಸ್ತೆ, ಚಾಮರಾಜನಗರ ಸಂಪರ್ಕಿಸುವಂತೆ ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ.