ಚಾಮರಾಜನಗರ: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಡೋರ, ಸಮಗಾರ, ಮೋಚಿ ಜನಾಂಗದವರಿಗೆ ವಿವಿಧ ಯೋಜನೆಗಳಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯಾಭಿವೃದ್ದಿ ತರಬೇತಿ ಶಿಬಿರ, ಮಾನವ ಸಂಪನ್ಮೂಲ ಯೋಜನೆ, ಸ್ವಾವಲಂಬಿ, ಸಂಚಾರಿ ಮಾರಾಟ ಮಳಿಗೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಫೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ವಸತಿ ಯೋಜನೆಗಳಿಗೆ ಅರ್ಹ ಚರ್ಮ ಕುಶಲಕರ್ಮಿಗಳು ಸೇವಾ ಸಿಂಧು ಪೋರ್ಟಲ್‍ನಲ್ಲಿ ಡಿಸೆಂಬರ್ 19ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9480886258, 9886020499 ಸಂಪರ್ಕಿಸುವಂತೆ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.