ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಎಲ್.ಎ.ಡಿ.ಸಿ.ಎಸ್ ಕಚೇರಿಯ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಚೇರಿ ಸಹಾಯಕರು/ಗುಮಾಸ್ತರು, ರಿಸೆಸ್ಪನಿಸ್ಟ್ ಕಮ್ ಡಾಟಾ ಎಂಟ್ರಿ ಆಪರೇಟರ್ (ಟೈಪಿಸ್ಟ್), ಕಚೇರಿ ಸೇವಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ ಸಂಬಂಧಿಸಿದ ದಾಖಲಾತಿಗಳೊಂದಿಗೆ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯದ ಆವರಣ, ಚಾಮರಾಜನಗರ-571313 ಇಲ್ಲಿಗೆ ನವೆಂಬರ್ 27ರೊಳಗೆ ಸಲ್ಲಿಸಬೇಕು. ಅರ್ಜಿ ಹಾಗೂ ವಿವರಗಳನ್ನು ಸದರಿ ಕಚೇರಿಯಿಂದ ಪಡೆಯಬಹುದೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಧರ. ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.