ಚಾಮರಾಜನಗರ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಗಡಿನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ವಾಗ್ಮಿಗಳು ಆದ ಸಿ. ಸೋಮಶೇಖರ್ ಅವರನ್ನು ನೇಮಕ ಮಾಡಿದ್ದು, ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನ. 23 ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಶರಣ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ದುಗ್ಗಹಟ್ಟಿ ಮಲ್ಲಿಕಾರ್ಜುನಸ್ವಾಮಿ ತಿಳಿಸಿದ್ದಾರೆ.
ಈ ಹಿಂದೆಯೂ ಸಹ ಡಾ. ಸೋಮಶೇಖರ್ ಅವರು ಕಾರ್ಯಾಧ್ಯಕ್ಷರಾಗಿ ಕೆಲವು ಕಾಲ ಸೇವೆ ಸಲ್ಲಿಸಿದ್ದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು 1986ರಲ್ಲಿ ಪ್ರಾರಂಭವಾಗಿದ್ದು, ಹಾಗೂ ಹೊರ ರಾಜ್ಯಗಳಲ್ಲಿ ಅಂಗವಾಗಿ ಕಾರ್ಯನಿರ್ವಹಿಸುತ್ತಿದೆ. ಶರಣ ಸಾಹಿತ್ಯ ಪ್ರಸಾರ, ಪ್ರಕಟಣೆ, ವಿಚಾರ ಸಂಕಿರಣಗಳು, ಸಮ್ಮೇಳನಗಳು, ದತ್ತಿ ಉಪನ್ಯಾಸಗಳು, ಇತ್ಯಾದಿ ಬಹುಮುಖವಾಗಿ ಸೇವೆ ಸಲ್ಲಿಸುತ್ತಿದೆ. ಅವರನ್ನು ಅಧ್ಯಕ್ಷರನ್ನಾಗಿ ನೇಮಕವಾಗಿರುವುದಕ್ಕೆ ತುಂಬ ಹೃದಯ ಅಭಿನಂದನೆಗಳು.
ಡಾ. ಸಿ. ಸೋಮಶೇಖರ್ ಅವರು ನೂತನ ಅಧ್ಕಕ್ಷರಾಗಿ ಇದೇ 23ರ ಗುರುವಾ ಮಧ್ಯಾಹ್ನ 3 ಗಂಟೆಗೆ ಅಧಿಕಾರ ಸ್ವೀಕರಿಸಲಿದ್ದಾರೆ. ಪರಿಷತ್ತಿನ ಗೌರವ ಸಲಹೆಗಾರರಾದ ಗೊ.ರು. ಚನ್ನಬಸಪ್ಪ ಹಾಗೂ ಪರಿಷತ್ನ ಅಧ್ಯಕ್ಷರಾದ ಅಪ್ಪಾರಾವ್ ಆಕ್ಖೋಣೆ ಅವರು ಉಪಸ್ಥಿತರಿರುತ್ತಾರೆ. ಜಿಲ್ಲೆಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಆಗಮಿಸಬೇಕೇಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.