ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರಿಂದ ವಿಶೇಷಚೇತನರಿಗೆ ತ್ರಿಚಕ್ರ ವಾಹನ, ಸಾಧನಾ ಸಲಕರಣೆ ವಿತರಣೆ

ಚಾಮರಾಜನಗರ:ವಿಕಲಚೇತನರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಡಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ವಿಶೇಷಚೇತನರಿಗೆ ತ್ರಿಚಕ್ರ ವಾಹನ, ಇತರೆ ಸಾಧನಾ ಸಲಕರಣೆಗಳನ್ನು ವಿತರಿಸಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಇಂದು ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ 4 ಯಂತ್ರ ಚಾಲಿತ ತ್ರಿಚಕ್ರ ವಾಹನ, 4 ಟಾಕಿಂಗ್ ಲ್ಯಾಪ್‍ಟಾಪ್ ಮತ್ತು 1 ಹೊಲಿಗೆ ಯಂತ್ರವನ್ನು ಶಾಸಕರು ವಿತರಿಸಿದರು.

ವಿಕಲಚೇತನರ ಕಲ್ಯಾಣ ಇಲಾಖೆ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಫಲಾನುಭವಿಗಳಿಗೆ ನಿಗದಿ ಮಾಡಿದ್ದ ಗುರಿ ಅನುಸಾರ ಸೌಲಭ್ಯಗಳನ್ನು ಶಾಸಕರು ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮೀ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುರೇಶ್, ರಾಜೇಶ್, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *