ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳ ವಿನಿಮಯಕ್ಕಾಗಿ ಒಡಂಬಡಿಕೆಗೆ ಸಹಿ

ಮೈಸೂರು: ಒಡಿಶಾ ಭುವನೇಶ್ವರದ KISS ಡೀಮ್ಡ್ ವಿಶ್ವವಿದ್ಯಾಲಯ ಆಯೋಜಿಸಿದ್ದ ವಿಶ್ವ ಮಾನವಶಾಸ್ತ್ರ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಅಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳ ನಡುವಿನ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳ ವಿನಿಮಯಕ್ಕಾಗಿ ಒಡಂಬಡಿಕೆಗೆ (MoU) ಸಹಿ ಹಾಕಲಾಯಿತು.

ಚಾಮರಾಜನಗರದ ವಿಶ್ವ ವಿದ್ಯಾನಿಲಯದ ಗೌರವಾನ್ವಿತ ಉಪಕುಲಪತಿಗಳಾದ ಪ್ರೊ.ಎಂ.ಆರ್.ಗಂಗಾಧರ್, ಮತ್ತು ಪ್ರೊ.ದೀಪಕ್ ಕುಮಾರ್ ಬೇಹರ, ಕಳಿಂಗ ಸಮಾಜಿಕ ವಿಜ್ಞಾನಗಳ ಸಂಸ್ಥೆ (KISS) ಡೀಮ್ಡ್ ವಿಶ್ವವಿದ್ಯಾನಿಲಯ, ಭುವನೇಶ್ವರ್, ಒಡಿಶಾ ಇವರ ನಡುವೆ ಅಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳ ನಡುವಿನ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳ ವಿನಿಮಯಕ್ಕಾಗಿ ಒಡಂಬಡಿಕೆಗೆ (MoU) ಸಹಿ ಹಾಕಿದರು.

ಇದರಿಂದ ನಮ್ಮ ವಿಶ್ವವಿದ್ಯಾಲಯದ ಅಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ ಸಿಗಲಿದೆ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಎಂ.ಆರ್.ಗಂಗಾಧರ್ ಪತ್ರಿಕಾ ಹೇಳಿಕೆ ನೀಡಿದರು.
ಅಲ್ಲದೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳು ನಮ್ಮ ವಿಶ್ವವಿದ್ಯಾನಿಲಯದ ಜೊತೆ ಇಂತಹ ಒಡಂಬಡಿಕೆ ಮಾಡಿಕೊಳ್ಳಲು ಆಸಕ್ತಿ ತೋರುತ್ತಿದ್ದು, ಪ್ರಕ್ರಿಯೆಯಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *