ಚಾಮರಾಜನಗರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.
ಅರ್ಜಿಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಹಾಗೂ ಚಾಮರಾಜನಗರ, ಕೊಳ್ಳೇಗಾಲ ತಾಲೂಕಿನ ಮಟ್ಟದ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಮತ್ತು ಗುಂಡ್ಲುಪೇಟೆ, ಯಳಂದೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ 08226-226070, ಚಾಮರಾಜನಗರ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ 08226-223823, ಕೊಳ್ಳೇಗಾಲ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ 08224-255060, ಗುಂಡ್ಲುಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂ.ಸಂ 08229-222984, ಯಳಂದೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂ.ಸಂ 08226-240309 ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.