ಚಾಮರಾಜನಗರ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2023-24ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಾಂಸ್ಕೃತಿಕ ಸಂಘ ಸಂಸ್ಥೆಗಳ ಚಟುವಟಿಕೆಗೆ ಧನ ಸಹಾಯ ನೀಡಲು ಸೇವಾ ಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಸಹಾಯಧನ ನೀಡಿ ತನ್ಮೂಲಕ ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ಸಾಂಸ್ಕøತಿಕ ವಾತಾವರಣ ಉಂಟು ಮಾಡುವಲ್ಲಿ ಶ್ರಮಿಸುತ್ತಿರುವ ಸಂಘ ಸಂಸ್ಥೆಗಳಿಗೆ ಧನಸಹಾಯ ನೀಡಲಾಗುವುದು.
ಅರ್ಜಿಗಳನ್ನು ಸೇವಾಸಿಂಧು www.sevasindhu.karnataka.gov.in ಮೂಲಕ ಡಿಸೆಂಬರ್ 13ರೊಳಗೆ ಸಲ್ಲಿಸಬೇಕು. ಮಾರ್ಗಸೂಚಿಯನ್ನು ಸೇವಾಸಿಂಧು ಪೊರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್ www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂ 08226-222210, ಮೊ.ಸಂ 9739383162, 9449181240 ಮತ್ತು ಜಿಲ್ಲೆಯ ಸೇವಾ ಸಿಂಧು ವ್ಯವಸ್ಥಾಪಕರನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.