ಸೆ. 22 ರಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆರಂಭ

ಮೈಸೂರು: ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ವತಿಯಿಂದ 2023-24ನೇ ಸಾಲಿನ ಮೈಸೂರು ಜಿಲ್ಲೆಯ ನಂಜನಗೂಡು, ಹೆಚ್.ಡಿ.ಕೋಟೆ, ಮೈಸೂರು, ಸರಗೂರು, ಕೆ.ಆರ್.ನಗರ, ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ತಾಲ್ಲೂಕುಮಟ್ಟದ ದಸರಾ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.

 ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ನಂಜನಗೂಡು ತಾಲೂಕಿನಲ್ಲಿ ಸೆಪ್ಟೆಂಬರ್ 22 ರಂದು ನಂಜನಗೂಡು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮೈಸೂರು ತಾಲೂಕಿನಲ್ಲಿ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸೆಪ್ಟೆಂಬರ್ 23 ರಂದು ಸರಗೂರು ತಾಲೂಕಿನಲ್ಲಿ ಬಾಲ್ ಫಿಲ್ಡ್ ಮೈದಾನ ಮತ್ತು ಲಯನ್ ಸ್ಕೂಲ್ ಆವರಣದಲ್ಲಿ ಹಾಗೂ ಹೆಚ್ ಡಿ ಕೋಟೆ ತಾಲೂಕಿನಲ್ಲಿ ಸೆಪ್ಟೆಂಬರ್ 25 ರಂದು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.

ಸೆಪ್ಟೆಂಬರ್ 25 ರಂದು ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯಲ್ಲಿನ ಜೆ.ಎಸ್.ಎಸ್ ವಿದ್ಯಾ ಸಂಸ್ಥೆ ಆವರಣದಲ್ಲಿ ನಡೆಯಲಿದ್ದು, ಕೆ ಆರ್ ನಗರ ತಾಲ್ಲೂಕಿನಲ್ಲಿ ಸೆ. 26 ರಂದು ಕೆ.ಆರ್ ನಗರ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.

 ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್‌ಬಾದ್, ಮೈಸೂರು ಇಲ್ಲಿನ ದೂರವಾಣಿ ಸಂಖ್ಯೆ: 0821-2564179 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *