ಹೆಬ್ಬಸೂರು ಗ್ರಾ.ಪಂ ಅಧ್ಯಕ್ಷರಾಗಿ ಪದ್ಮಾನಂಜುಂಡಸ್ವಾಮಿ, ಉಪಾಧ್ಯಕ್ಷರಾಗಿ ಎನ್,ಕುಮಾರ್ ಆಯ್ಕೆ

ಚಾಮರಾಜನಗರ: ತಾಲ್ಲೂಕಿನ ಹೆಬ್ಬಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಪದ್ಮಾ ನಂಜುಂಡಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ ಎನ್,ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು ೧೭ ಸದಸ್ಯರಲ್ಲಿ ಇವರಿಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು, ಈ ಹಿನಲೆಯಲ್ಲಿ ಈ ಇಬ್ಬರನ್ನು ಚುನಾವಣಾಧಿಕಾರಿ ಉದಯ್‌ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಗಿದ್ದಾರೆಂದು ಘೋಷಿಸಿದ್ದಾರೆ.

ಈ ಸಂರ್ಭದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರುಗಳು.ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಗ್ರಾಮಸ್ಥರು ಹಾಜರಿದ್ದರು.

Leave a Reply

Your email address will not be published. Required fields are marked *