ಚಾಮರಾಜನಗರ: ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಉಚಿತವಾಗಿ ನಿರುದ್ಯೋಗಿಗಳಿಗೆ ನವೆಂಬರ್ ೨೩ ರಿಂದ ೧೦ ದಿನಗಳ ಕಾಲ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಮತ್ತು ೩೦ ದಿನಗಳ ಅವಧಿಯ ಮಹಿಳಾ ಬ್ಯೂಟಿಪಾರ್ಲರ್ ತರಬೇತಿಯನ್ನು ನೀಡುತ್ತಿದ್ದು, ಆಸಕ್ತರು ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ.

ತರಬೇತಿಯನ್ನು ಮಾದಾಪುರದ ಸಮಾಜ ಕಲ್ಯಾಣ ಇಲಾಖೆಯ ಕಟ್ಟದಲ್ಲಿ ನೀಡಲಾಗುವುದು. ಅಭ್ಯರ್ಥಿಗಳು ೧೮ ರಿಂದ ೪೫ ವರ್ಷದವರಾಗಿರಬೇಕು. ಗ್ರಾಮೀಣ ಭಾಗದವರಾಗಿರಬೇಕು. ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು. ನವೆಂಬರ್ ೨೨ ರೊಳಗೆ ಎಸ್.ಬಿ.ಐ. ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ ೦೮೨೨೬-೨೦೦೨೧೪, ಮೊ.ಸಂ ೯೬೦೬೦೯೮೮೭೮ ಸಂಪರ್ಕಿಸುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.